
ಬೆಂಗಳೂರು : ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ. ಈಗಾಗಲೇ ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ20 ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ10 ರಷ್ಟು ಕುಸಿತವಾಗಿದೆ. ಈ ಕೃಪಾಂಕ ನೀಡಿದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು. ಇದೀಗ, ಕೃಪಾಂಕಕ್ಕೆ ಬ್ರೇಕ್ ಹಾಕಿದ್ದಾನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ : https://ashwaveega.com/cm-siddaramaiah-mooda-scam-high-court-verdict/