
ಬೆಂಗಳೂರು : ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇಂದು ಬಿಡದಿ ತೋಟದ ಮನೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿರುವ, ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿತ್ತೆನೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಇನ್ನೂ ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನಿಖಿಲ್ ಚುನಾವಣೆಗೆ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು.
ಅ ವೇಳೆ ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಈ ಹಿನ್ನೆಲೆ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : https://ashwaveega.com/the-job-is-to-change-the-cm-for-the-opposition-parties-minister-g-parameshwar/