ದೆಹಲಿ : ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನೀಡಿದ್ದು, ಆದೇಶವನ್ನು ಹಿಂಪಡೆದ ಕರ್ನಾಟಕದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಬಿಜೆಪಿ ಶಾಸಕ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿದ್ದು, ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.