
ಧಾರವಾಡ: ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ವಿಕಲಚೇತನರು ಭಾಗಿಯಾಗಿದ್ದು, ಆ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ ಮೇಲೆ ಕುಳಿತು ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲು ಸಂಬಂಧಪಟ್ಟ ಅಧಿಕಾರಿಗೆ ಸಚಿವ ಸಂತೋಷ್ ಲಾಡ್ ಸೂಚಿಸಿದ್ದಾರೆ. ಕಾರ್ಮಿಕ ಸಚಿವರ ಈ ನಡೆಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇದೆ ವೇಳೆ ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮೂಲಕ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದು, ವಿವಿಧ ಅಹವಾಲುಗಳನ್ನು ಹೇಳಿಕೊಂಡು ಬರುವವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುವ ಅವರು ಫೌಂಡೇಶನ್ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಲೇ ಇರುತ್ತಾರೆ.