
ಹಾಸನ : ಐತಿಹಾಸಿಕ ಹಾಸನಾಂಬಾ ದೇಗುಲ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದು, ನವೆಂಬರ್ 3 ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಅಲ್ಲಿವರೆಗೆ ಭಕ್ತರು ದೇವಿಯ ದರ್ಶನ ಪಡೆಬಹುದಾಗಿದ್ದು, ಇದೀಗ ಹಾಸನಾಂಬ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದೆ.
ಹಾಸನ, ಅಕ್ಟೋಬರ್ 24 ಇಂದು ಹಾಸನಾಂಬ ದರ್ಶನ ಆರಂಭವಾಗಿದ್ದು, ಇನ್ನೇನು ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ಹಾಸನಾಂಬ ದರ್ಶನಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ದೇಗುಲವನ್ನು ಸಿಂಗರಿಸಲಾಗಿದೆ. ಒಟ್ಟು 11 ದಿನ ದೇಗುಲದ ಬಾಗಿಲು ತೆರೆಯಲಾಗಿದ್ದು, ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ದಸರಾ ಮಾದರಿಯ ಲೈಟಿಂಗ್ಸ್, ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್, ಭಕ್ತರಿಗೆ ವಿಶೇಷ ದರ್ಶನ ಅವಕಾಶ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದೆ.
ಹಾಸನಾಂಬ ದರ್ಶನ ಸಮಯ
ಸಾಮಾನ್ಯವಾಗಿ ಹಾಸನಾಂಬ ದೇಗುಲದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ಈ ಬಾರಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರವಲ್ಲದೆ, ನೈವೇದ್ಯದ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಅವಧಿಯಲ್ಲೂ (ದಿನ ಪೂರ್ತಿ) ದರ್ಶನಕ್ಕೆ ಅವಕಾಶವಿದೆ.
ನೇರ ದರ್ಶನಕ್ಕೆ 1000 ರೂ. ಟಿಕೆಟ್
ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.