ಅಮರಾವತಿ : ನನ್ನ ಸಹೋದರ ಜಗನ್ ಮೋಹನ್ ರೆಡ್ಡಿ ಆಸ್ತಿಯಲ್ಲಿ ನನ್ನ ಪಾಲು ಕೊಟ್ಟಿಲ್ಲ ಎಂದು ಶರ್ಮಿಳಾ ಆರೋಪಿಸಿದ್ದು, ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ನನ್ನ ಸಹೋದರ ಜಗನ್ ಮೋಹನ್ ರೆಡ್ಡಿ ಕುಟುಂಬದ ಆಸ್ತಿಯಲ್ಲಿ ನನ್ನ ಪಾಲನ್ನು ನನಗೆ ನೀಡಿಲ್ಲ ಎಂದಿದ್ದಾರೆ.
ಜಗನ್ ಆಸ್ತಿಗಳ ಏಕೈಕ ಉತ್ತರಾಧಿಕಾರಿಯಲ್ಲ. ಕುಟುಂಬದ ಯಾವುದೇ ಆಸ್ತಿಯು ನ್ಯಾಯಸಮ್ಮತವಾಗಿ ತನಗೆ ಸೇರಿಲ್ಲ. ತಮ್ಮ ತಂದೆ ವೈ.ಎಸ್. ರಾಜಶೇಖರ ರೆಡ್ಡಿ ಅವರ ಜೀವಿತಾವಧಿಯಲ್ಲಾಗಲಿ ಅಥವಾ ಅವರ ನಿಧನದ ನಂತರ ಯಾವುದೇ ಆಸ್ತಿ ವರ್ಗಾವಣೆ ನಡೆದಿಲ್ಲ.ನನ್ನ ಮತ್ತು ನನ್ನ ಮಕ್ಕಳ ಪಾಲಿನ ಒಂದೇ ಒಂದು ಆಸ್ತಿಯನ್ನು ನಾನು ಇನ್ನೂ ಹೊಂದಿಲ್ಲ ಎಂದು ನಾನು ಘೋಷಿಸುತ್ತೇನೆ. ಈ ವಿಚಾರವನ್ನು ವೈಎಸ್ಆರ್ ಅಭಿಮಾನಿಗಳಿಗೆ ಅವರು ಬರೆದ ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ
ವೈಎಸ್ಆರ್ ಅವರ ಆಸ್ತಿ ಅವರ ನಾಲ್ವರು ಮೊಮ್ಮಕ್ಕಳಿಗೆ ಸಮಾನವಾಗಿ ಹಂಚಿಕೆಯಾಗಬೇಕು. ಆ ರೀತಿ ಹಂಚಿಕೆ ಮಾಡುವುದು ಜಗನ್ ಕರ್ತವ್ಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.