ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇಬರ್ಬರವಾಗಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಂದಿರಾನಗರ ರಾಯಲ್ ಇನ್ ಅಪಾರ್ಟ್ಮೆಂಟ್ ಅಲ್ಲಿ ಬರ್ಬರ ಹತ್ಯೆಯಾಗಿದೆ. ಅಸ್ಸಾಂ ಮೂಲದ ಮಾಯಾ ಗೊಗಾಯ್ ಕೊಲೆಯಾದ ಯುವತಿ ಯುವತಿಯಾಗಿದ್ದು, ಆರವ್ ಅನಾಯ್ ಕೊಲೆ ಆರೋಪಿಯಾಗಿದ್ದಾನೆ.
ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಮೂಲತಃ ಕೇರಳದವನಾದ ಆರೋಪಿ ದಿ ರಾಯಲ್ ಲಿವಿನ್ಸ್ ನಲ್ಲಿ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಈ ಘಟನೆ ಸಂಬಂಧ ಸ್ಥಳಕ್ಕೆ ಇಂದಿರಾ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.