ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಲಿದೆ. ದರ್ಶನ್ ಪರ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಬಳಿಕ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಿಸಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಲಿದ್ದಾರೆ.
ಹೈಕೋರ್ಟ್ ನ್ಯಾ. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. A1 ಆರೋಪಿ ಪವಿತ್ರಾಗೌಡ, A2 ನಟ ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.