
ಸಂಪುಟ ಪುನಾರಚನೆ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಸಿಎಂ ದೆಹಲಿಗೆ ಹೋಗಿದ್ದಾರೆ. ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ಇದೆ, ಅದಕ್ಕಾಗಿ ಹೋಗ್ತಿದ್ದಾರೆ.
ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ ಮಾಡ್ತಾರಾ ಅನ್ನೋದರ ನನಗೆ ಬಗ್ಗೆ ಗೊತ್ತಿಲ್ಲ ಎಂದು ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ರು.