ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ .
ರಾಜ್ಯಕ್ಕೆ ತರುಣ್ ಚುಗು ಆಗಮಿಸಿದ್ದು, ಬಿಜೆಪಿ ಕಚೇರಿಗೆ ಬಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಈ ವೇಳೆ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಸೇರಿ ಹಲವರು ಉಪಸ್ಥಿತರಿದ್ದರು.