ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ಸಿಕ್ಕಿರಲಿಲ್ಲ.
ಬದಲಾಗಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲಾಗಿತ್ತು. ಇದೀಗ ಇದೇ ಜೋಡಿಯನ್ನು ಮುಂದುವರೆಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ̤ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ಗೆ ಚಾನ್ಸ್ ನೀಡಲು ಬಯಸಿದ್ದಾರೆ.