
ಇಂದು ಅಮೆರಿಕಾದಿಂದ ನಟ ಶಿವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಶಿವಣ್ಣ ಕ್ಯಾನ್ಸರ್ ಚಿಕಿತ್ಸೆ ಬಳಿಕ 6 ವಾರಗಳ ವಿಶ್ರಾಂತಿ ಪಡೆದಿದ್ದರು. ಈಗಾಗಲೇ ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮುಲಕ ಮಾಹಿತಿ ಹಂಚಿಕೊಂಡಿದ್ದರು. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ ನಿಮ್ಮನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಮರಳಿ ಬರುತ್ತಿದ್ದೇನೆ ನಿಮ್ಮ ಆರ್ಶೀವಾದ ಹೀಗೆ ಇರಲಿ ಎಂದು ಶಿವಣ್ಣ ಹೇಳಿದ್ದಾರೆ. ಕಳೆದ 2024ರ ಡಿಸೆಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವಣ್ಣಗೆ ಚಿಕಿತ್ಸೆ ಯಶಸ್ವಿಯಾಗಿದೆ. ವೈದ್ಯರ ಸಲಹೆ ಮೇರೆಗೆ 1 ತಿಂಗಳ ಕಾಲ ಅಮೆರಿಕಾದಲೇ ವಿಶ್ರಾಂತಿ ಪಡೆದು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಜೋರಾಗಿದೆ..
