
ಚಾಂಪಿಯನ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್, ಹಾಗೂ ಜೋಶ್ ಹೇಜಲ್ವುಡ್ಗೆ ಗಾಯದ ಸಮಸ್ಯೆ ಕಾಡುತ್ತಿದ್ದು ಇವರಿಬ್ಬರು ಕಣಕ್ಕಿಳಿಯಲು ಸಾಧ್ಯವಾಗುದಿಲ್ಲ ಎಂದು ಮುಖ್ಯ ಕೋಚ್ ಆಂಡ್ರ್ಯೂ ಮೆಕ್ಡೊನಾಕಲ್ಡ್ ಹೇಳಿದ್ದಾರೆ. ಜೋಶ್ ಹೇಜಲ್ವುಡ್ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ಹೇಜಲ್ವುಡ್ ಜೊತೆಗೆ ನಾಯಕ ಪ್ಯಾಟ್ ಕಮಿನ್ಸ್ಗೆ ಪಾದದ ನೋವು ಎದುರಾಗಿದ್ದು ಅವರು ಕೂಡ ಚಾಂಪಿಯನ್ಸ್ ಟ್ರೋಫಿ ಆಡುವ ಸಾಧ್ಯತೆಯಿಲ್ಲ ಎಂದು ಕೋಚ್ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಇಬ್ಬರು ಸ್ಟಾರ್ ಬೌಲರ್ಗಳು ಇಲ್ಲದೇ ಇರುವುದು ಭಾರೀ ಹಿನ್ನಡೆಯಾಗಿದೆ. ಇವರಿಬ್ಬರ ಸ್ಥಾನಕ್ಕೆ ಬದಲಿ ಆಟಗಾರರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, 2023ರ ಏಕದಿನ ವಿಶ್ವಕಪ್ನಲ್ಲಿ ಜಯ ಗಳಿಸಿತ್ತು.
ಅಭಿಷೇಕ್ . ಎಸ್