
ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಏಕದಿನ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾಗಲೇ ಮೊದಲೆರಡು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಹಾಗಾಗೀ ಈ ಪಂದ್ಯವು ಭಾರತ ಪಾಲಿಗೆ ಔಪಚಾರಿಕ ಪಂದ್ಯವಾಗಿದ್ದು ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ಈ ಪೈಕಿ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್, ಬೌಲಿಂಗ್ನಲ್ಲಿ ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ಗೆ ಈ ಪಂದ್ಯದಲ್ಲಿ ಅವಕಾಶ ಸಿಗಬಹದು ಭಾರತ ಜಯದೊಂದಿಗೆ ಸರಣಿಯನ್ನು ಮುಗಿಸುವ ಲೆಕ್ಕಾಚಾರದಲ್ಲಿದ್ದರೆ, ಇಂಗ್ಲೆಂಡ್ ಕ್ಲೀನ್ಸ್ವೀಪ್ನಿಂದ ತಪ್ಪಿಸಿಕೊಳ್ಳುವ ಆತಂಕದಲ್ಲಿದೆ.

ಭಾರತ ತಂಡ
ರೋಹಿತ್ ಶರ್ಮಾ , ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್, ರ್ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್

ಅಭಿಷೇಕ್ ಎಸ್