
ಫೈನಲ್ ಪಂದ್ಯದಲ್ಲಿ ಈ ತಂಡ ಗೆಲಲ್ಲಿ ಎಂದ ಡೇವಿಡ್ ಮಿಲ್ಲರ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯಕ್ಕೆ ವೇದಿಕೆ ತಯರಾಗಿದೆ. ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಸೆಮಿಪೈನಲ್ನಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿದೆ. 2ನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪೈನಲ್ಗೆ ಎಂಟ್ರಿ ಕೊಟ್ಟಿದೆ. ಈ ಎರಡು ತಂಡಗಳ ನಡುವೆ ಫೈನಲ್ ಕಾದಾಟ ನಾಳೆ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ಬ್ಯಾಟರ್ ಡೇವಿಡ್ ಮಿಲ್ಲರ್ ಪ್ರಕಾರ ಪೈನಲ್ ಪಂದ್ಗದಲ್ಲಿ ದಕ್ಷಿಣ ಆಫ್ರಿಕಾ ತಂಡ ಜಯ ಗಳಿಸಲಿ ಎಂದು ಹೇಳಿ ಭಾರತೀಯ ಅಭಿಮಾನಿಗಳ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ. ಸೆಮಿಸ್ನಲ್ಲಿ ಕಿವೀಸ್ ವಿರುದ್ದ ಸೋತ ನಂತ ಮಾತನಾಡಿದ ಮಿಲ್ಲರ್ ಐಸಿಸಿ ಅಯೋಜಿಸಿದ್ದ ಸೆಮಿಫೈನಲ್ ವೇಳಾಪಟ್ಟಿಯ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಪೈನಲ್ ಪಂದ್ಯದಲ್ಲಿ ನಿಮ್ಮಗೆ ಯಾರು ಗೆಲ್ಲಬೇಕು ಎಂಬ ಪ್ರಶ್ನೆ ಕೇಳಿದಾಗ ಉತ್ತರಿಸಿದ ಡೇವಿಡ್ ಮಿಲ್ಲರ್ ಫೈನಲ್ ಮ್ಯಾಚ್ನಲ್ಲಿ ನ್ಯೂಜಿಲೆಂಡ್ ತಂಡ ಗೆಲ್ಲಬೇಕು ಎಂದಿದ್ದಾರೆ. ಡೇವಿಡ್ ಮಿಲ್ಲರ್ ಅವರ ಹೇಳಿಕೆಎ ಭಾರತೀಯ ಅಭಿಮಾನಿಗಳನ್ನು ಕೆರಳುವಂತೆ ಮಾಡಿದ್ದು ದಕ್ಷಿಣ ಆಫ್ರಿಕಾ ಬಿಟ್ಟರೆ ನಿಮ್ಮಗೆ ಹೆಚ್ಚು ಫ್ಯಾನ್ಸ್ ಇರೋದು ಭಾರತದಲ್ಲೋ ಆಥವಾ ನ್ಯೂಜಿಲೆಂಡ್ನಲ್ಲಿಯೋ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಅಭಿಷೇಕ್.ಎಸ್