
ಬೆಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿ ವೈ ವಿಜಯೇಂದ್ರ ಜೊತೆಗೆ ರಹಸ್ಯ ಮಾತುಕತೆ ನಡೆಸಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಮಾರತ್ತಹಳ್ಳಿ ಆಸ್ಪತ್ರೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಆಗಮಿಸಿದ್ದ ಅಮಿತ್ ಶಾ, ಆ ನಂತರ ಎಲ್ಲವನ್ನು ಪಕ್ಕಕ್ಕೆ ಸೇರಿಸಿ, ಕೇವಲ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೊಟ್ಟಿಗೆ ಕೆಲ ನಿಮಿಚಗಳ ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ಕಡೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಹೆಚ್ಚಾಗುತ್ತಿದ್ದು ಬಿ ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಆ ಸ್ಥಾನಕ್ಕೆ ಚುನಾವಣೆ ನಡೆಸಬೇಕೆಂಬ ಆಗ್ರಹಗಳ ನಡುವೆಯೇ ಅಮಿತ್ ಶಾ ಮತ್ತು ವಿಜಯೇಂದ್ರ, ಯಡಿಯೂರಪ್ಪ ಜೊತೆಗಿನ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ. =====================

ಅಭಿಷೇಕ್. ಎಸ್