
Plane crashes near Ahmedabad airport
ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ಗೆ ತೆರಳುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಅಹಮದಾಬಾದ್ನಿಂದ ಮಧ್ಯಾಹ್ನ 3.38 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆ ವಿಮಾನದಲ್ಲಿದ್ದರು.
242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ಸಹ ದೃಢಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.
“ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಅದು ಯಾವ ರೀತಿಯ ವಿಮಾನ ಎಂದು ಇನ್ನೂ ಸ್ಪಷ್ಟವಾಗಿಲ್” ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ.
ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ಗೆ ತೆರಳುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಅಹಮದಾಬಾದ್ನಿಂದ ಮಧ್ಯಾಹ್ನ 3.38 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆ ವಿಮಾನದಲ್ಲಿದ್ದರು.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀಡಲು ನಾವು 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದ್ದೇವೆ. ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ವೇಗವಾಗಿ ನಡೆಯುತ್ತಿವೆ.
ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಮತ್ತು ಆಸ್ಪತ್ರೆಗಳಿಗೆ ಸಾಗಿಸಲು ಹಸಿರು ಕಾರಿಡಾರ್ ಸ್ಥಾಪಿಸಲಾಗುತ್ತಿದೆ. ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಲ್ಲಿ ಅವಶೇಷಗಳು ಬಿದ್ದಿವೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸೇವೆಗಳು ಮತ್ತು ಇತರ ಸಂಸ್ಥೆಗಳು ಭರದಿಂದ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ.