
Driver Slaps Woman in Bengaluru Over Rash Driving
ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಚಾಲಕನ ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಿದ್ದು, ಯುವತಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಹೌದು. . ಮೂರು ದಿನಗಳ ಹಿಂದೆ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋ ರೂಂ ಬಳಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ಎನ್ನುವಾತ ಶ್ರೇಯಾ ಎನ್ನುವ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ. ಜೂನ್ 14ರಂದು ಈ ಘಟನೆ ನಡೆದಿದೆ. ಆದ್ರೆ, ಇಂದು (ಜೂನ್ 16) ಈ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಘರ್ಷಣೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು, ಈ ಸಮಯದಲ್ಲಿ ಚಾಲಕ ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಆರಂಭದಲ್ಲಿ ಅಧಿಕಾರಿಗಳನ್ನ ಸಂಪರ್ಕಿಸಲು ಹಿಂಜರಿದರೂ, ಅಂತಿಮವಾಗಿ ದೂರು ದಾಖಲಿಸಲು ಮನವೊಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ 3 ದಿನಗಳ ಹಿಂದೆ ರ್ಯಾಪಿಡೋ ಸೇವೆ ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನು ಅತಿ ವೇಗವಾಗಿ (ರ್ಯಾಶ್ ಡ್ರೈವಿಂಗ್) ವಾಹನ ಚಲಾಯಿಸುತ್ತಿದ್ದುದರಿಂದ, ಯುವತಿ ಚಾಲಕನನ್ನು ಪ್ರಶ್ನಿಸಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟಯಾಗಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಚಾಲಕ ಸುಹಾಸ್ ಯುವತಿ ರಪ್ ಅಂತ ಬಾರಿಸಿದ್ದದಾನೆ. ಹೊಡೆದ ಏಟಿಗೆ ಯುವತಿ ರಸ್ತೆಗೆ ಬಿದ್ದಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ಈ ಘಟನೆ ನಡೆದ ನಂತರ ಯುವತಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣವಾಗಿ ವಿಡಿಯೋ ಸಮೇತ ಮಾಹಿತಿ ಪಡೆದುಕೊಂಡ ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಎನ್ಸಿಆರ್ ದಾಖಲಿಸಿದ್ದಾರೆ. ಆದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿಸಿದ್ದಾರೆ ಎನ್ನಲಾಗಿದೆ.