
auto service charges increased in bangalore
ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಪ್ರಯಾಣದ ದರ ಏರಿಕೆ ಕಂಡುಬಂದಿದೆ. ಓಲಾ ಸೇರಿದಂತೆ ಕೆಲ ಅಗ್ರಿಗೇಟರ್ ಕಂಪನಿಗಳು ಬೇಕಾಬಿಟ್ಟಿ ವಸೂಲಿ ಮಾಡ್ತಿರುವ ಆರೋಪ ಕೇಳಿ ಬಂದಿದೆ.
ಫಾರ್ ಎಕ್ಸಾಂಪಲ್ ಟೌನ್ ಹಾಲ್ ನಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕಿರುವ ಅಂತರ 2.02ಕಿಲೋ ಮೀಟರ್ ಇದೆ. ನಿಯಮದ ಪ್ರಕಾರ 30-₹35 ರೂಪಾಯಿ ತಗೋಬೇಕು. ಆದ್ರೆ ಓಲಾದಲ್ಲಿ 98 ರೂಪಾಯಿ ತಗೊಂಡಿದೆ. ಇದೇ ರೀತಿ ಹಲವೆಡೆ ಬೇಕಾಬಿಟ್ಟಿ ವಸೂಲಿ ಮಾಡ್ತಿರೊದಾಗಿ ಆರೋಪ ಕೇಳಿಬಂದಿದೆ.
ಬೆಂಗಳೂರಲ್ಲಿ 2021ರಿಂದ ಬೈಕ್ ಟ್ಯಾಕ್ಸಿ ಸೇವೆ ಜಾರಿಯಲ್ಲಿತ್ತು. ಇದು ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲಲ್ಲಿ ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ಸಹ ನಡೆದಿತ್ತು. ಬೆನ್ನಲ್ಲೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠವು, ಏಪ್ರಿಲ್ 2ರಂದು ನ್ಯಾಯಾಲಯ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು 6 ವಾರಗಳ ಒಳಗೆ ನಿಲ್ಲಿಸುವಂತೆ ಆದೇಶಿಸಿತ್ತು. ನ್ಯಾಯಾಲಯ ನೀಡಿದ್ದ 6 ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಅದಾಗ್ಯೂ, ರಾಪಿಡೋ, ಓಲಾ ಮತ್ತು ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ನಿರ್ವಾಹಕರು ಆದೇಶ ವಿಸ್ತರಣೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದರು.
ಈ ವಿನಂತಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಅಂತಿಮವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲು ಗಡುವನ್ನು ಜೂನ್ 15ರವರೆಗೆ ವಿಸ್ತರಿಸಿದ್ರು. ಆದರೆ ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳನ್ನು ರೂಪಿಸದ ಕಾರಣ ಮತ್ತೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆಯನ್ನು ಜೂನ್ 24ಕ್ಕೆ ನಿಗದಿಪಡಿಸಲಾಗಿದೆ.