
dk suresh appears for hearing
(ಅಶ್ವವೇಗ) Ashwaveega News 24×7 ಜು.08: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಮತ್ತೆ ನೋಟಿಸ್ ನೀಡಿತ್ತು. ಇಂದು ಡಿಕೆ ಸುರೇಶ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ದಾಖಲಾತಿಗಳೊಂದಿಗೆ ತಮ್ಮ ಲಾಯರ್ ಜೊತೆ ಇಡಿ ಕಚೇರಿಗೆ ಬಂದ ಡಿಕೆ ಸುರೇಶ್ ಒಳಗೆ ಹೋಗಿ ಮಾಹಿತಿ ನೀಡ್ತಿದ್ದಾರೆ ಎನ್ನಲಾಗ್ತಿದೆ.
ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅವರನ್ನ ಇಡಿ ಬಂಧಿಸಿತ್ತು. ಐಶ್ವರ್ಯಾ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗ್ತಿದೆ. ತಾನು ಡಿಕೆ ಸುರೇಶ್ ತಂಗಿ ಎಂದು ಐಶ್ವರ್ಯಗೌಡ ಹೇಳಿಕೊಂಡು ಅನೇಕರಿಗೆ ವಂಚಿಸಿದ್ರು ಎನ್ನುವ ಆರೋಪ ಕೂಡ ಇದೆ.
ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಅಂತ ಅವರ ಹೆಸರಿನಲ್ಲಿ ವಂಚನೆ ಎಸಗಿದ್ದರು ಎಂದು ವರದಿ ಆಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು ಎನ್ನಲಾಗ್ತಿದೆ.