
Anchor Anushree's Wedding
(ಅಶ್ವವೇಗ) Ashwaveega News 24×7 ಜು.17: ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ರೋಷನ್ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಅನುಶ್ರೀ ಅವರು ಫ್ಯಾಮಿಲಿ ನೋಡಿದ ಹುಡುಗನನ್ನೇ ಮದುವೆ ಆಗುತ್ತಿದ್ದಾರೆ. ಬೆಂಗಳೂರಿನಲ್ಲಿ ಗ್ರಾಂಡ್ ಆಗಿ ಮದುವೆ ನಡೆಯಲಿದೆ.
ಕೆಲ ಫೇಕ್ ಸೋಶಿಯಲ್ ಮೀಡಿಯಾ ಪೇಜ್ಗಳು ಅನುಶ್ರೀ ಆ ನಟನ ಜೊತೆ ಮದುವೆ ಆಗಲಿದ್ದಾರೆ, ಈ ನಟನ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿಸುತ್ತಿತ್ತು. ಆಗೆಲ್ಲ ಅನುಶ್ರೀ ಅವರೇ “ಇದೆಲ್ಲ ಸುಳ್ಳು” ಎಂದು ಹೇಳುತ್ತಿದ್ದರು. ಸಾಕಷ್ಟು ಜನರ ಜೊತೆ ಅನುಶ್ರೀ ಹೆಸರು ಥಳುಕು ಹಾಕಿಕೊಂಡಿತ್ತು.
“ಈ ಬಾರಿ ನಾನು ಮದುವೆ ಆಗ್ತೀನಿ, ಈ ವರ್ಷವೇ ಮದುವೆ ನಡೆಯುತ್ತದೆ” ಎಂದು ಅನುಶ್ರೀ ಅವರು ʼಸರಿಗಮಪʼ ಸೇರಿದಂತೆ ʼಮಹಾನಟಿʼ ಶೋನಲ್ಲಿ ಸಾಕಷ್ಟು ಬಾರಿ ಹೇಳಿದ್ದರು. ಅದೀಗ ನಿಜವಾಗ್ತಿದೆ. ಈ ಬಗ್ಗೆ ಅನುಶ್ರೀ ಅವರು ಅಧಿಕೃತ ಹೇಳಿಕೆ ನೀಡಬೇಕಿದೆ.
ಇಲ್ಲಿಯವರೆಗೆ ಸಾಕಷ್ಟು ರಿಯಾಲಿಟಿ ಶೋಗಳ ನಿರೂಪಣೆ ಮಾಡಿರುವ ಅನುಶ್ರೀ ಸಾವಿರಾರು ಇವೆಂಟ್ಗಳ ನಿರೂಪಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿನಿಮಾದಲ್ಲಿಯೂ ಹೀರೋಯಿನ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ʼಉಪ್ಪು ಹುಳಿ ಖಾರʼ ಸಿನಿಮಾದಲ್ಲಿಯೂ ಅವರು ನಟಿಸಿದ್ದರು.ಬಿಗ್ ಬಾಸ್ ಕನ್ನಡ, ಡ್ಯಾನ್ಸ್ ಶೋನಲ್ಲಿಯೂ ಅನುಶ್ರೀ ಅವರು ಭಾಗವಹಿಸಿದ್ದರು.