
Devil Movie Motion Poster Released
Ashwaveega News 24×7 ಜು. 20: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್ʼ ಸಿನಿಮಾ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಅತ್ತ ಥಾಯ್ಲೆಂಡ್ನಲ್ಲಿ ಶೂಟಿಂಗ್ ಕಂಪ್ಲೀಟ್ ಮಾಡಲು ದರ್ಶನ್ ಬೀಡು ಬಿಟ್ಟಿರುವ ಹೊತ್ತಿನಲ್ಲೇ ಚಿತ್ರತಂಡ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ತೆರೆ ಎಳೆದಿದ್ದಾರೆ.
ಫೇಸ್ಬುಕ್ ಖಾತೆಯಲ್ಲಿ ಮೋಷನ್ ಪೋಸ್ಟರ್ನ 1:05 ನಿಮಿಷದ ವಿಡಿಯೋ ಹಂಚಿಕೊಂಡಿರುವ ದರ್ಶನ್, ನಲ್ಮೆಯ ಸೆಲಬ್ರಿಟಿಗಳಿಗೆ ವಿಶೇಷ ಸಂದೇಶವೊಂದನ್ನೂ ನೀಡಿದ್ದಾರೆ. ನಲ್ಮೆಯ ಸೆಲಬ್ರಿಟಿಗಳಿಗೆ… ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ.
ಸದ್ಯಕ್ಕೆ ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. ಈ ಮೋಷನ್ ಪೋಸ್ಟರ್ನಲ್ಲಿ ದರ್ಶನ್ ಖದರ್ ಲುಕ್ನಲ್ಲಿ ಕಾಣಿಸಿಕೊಂಡಿರುವುದು ವಿಶೇಷ.
ಅಲ್ಲದೇ ಅತ್ತಿಬೆಲೆ ಅಭಿಮಾನಿಗಳ ಸಮ್ಮುಖದಲ್ಲಿಯೂ ಕೂಡಾ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಇನ್ನೂ ದಚ್ಚು ವಿಡಿಯೋ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ ಸಾವಿರಾರು ಡಿಬಾಸ್ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ʻಲವ್ ಯು ಡಿಬಾಸ್, ಜೈ ಡಿಬಾಸ್ʼ ಅಂತೆಲ್ಲ ಕಾಮೆಂಟ್ ಮಾಡಿದ್ದಾರೆ.