
Prajwal Revanna
Ashwaveega News 24×7 ಜು. 30: ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಇಂದು ತೀರ್ಪು ನೀಡಲಿದೆ.
ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ.
ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್ಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು.
ಸದ್ಯ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇಂದಿನ ಪ್ರಕರಣದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಅನುಮಾನವಾಗಿದೆ.