
ramya says justice delivered to all women after prajwal revanna verdict
Ashwaveega News 24×7 ಅ. 01: ಸ್ಯಾಂಡಲ್ವುಡ್ ಮೋಹಕತಾರೆ, ನಟಿ ರಮ್ಯಾ (ದಿವ್ಯ ಸ್ಪಂದನ) ಅವರು ಮಹಿಳೆಯರ ಮೇಲಿನ ಶೋಷಣೆ ವಿಚಾರವಾಗಿ ಧ್ವನಿ ಎತ್ತುತ್ತಲೇ ಇದ್ದಾರೆ. ಧರ್ಮಸ್ಥಳ ಕೇಸ್, ರೇಣುಕಾಸ್ವಾಮಿ ಕೊಲೆ ಕೇಸ್ ಬಳಿಕ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೇಸ್ ವಿಚಾರವಾಗಿಯೂ ಪೋಸ್ಟ್ ಹಂಚಿಕೊಂಡು ಮಹಿಳೆಯರ ಪರ ನಿಲುವು ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ರಮ್ಯಾ ಅವರು ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಕಳೆದ ಪ್ರಜ್ವಲ್ ರೇವಣ್ಣನ ಕೇಸ್ ಬಯಲಿಗೆ ಬಂದಾಗ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲೂ ರಮ್ಯಾ ಅವರು ಪ್ರತಿಕ್ರಿಯಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಂಧನ ಹಾಗೂ ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆದ ಬಗ್ಗೆ ಮಾತನಾಡಿದ್ದ ಅವರು “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದಿದ್ದರು. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕರ್ನಾಟಕ ಪೊಲೀಸರಿಗೆ ಸಲ್ಯೂಟ್ ಎಂದಿದ್ದರು.
‘ಕಾನೂನು ಉಲ್ಲಂಘಿಸುವವರ ಬಗ್ಗೆ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಪ್ರಭಾವಿಗಳು ಮತ್ತು ಅವರ ಹಿಂಸಾತ್ಮಕ ಕೃತ್ಯಗಳಿಗೆ ಬಲಿಯಾಗುವವರು ಬಡವರು, ಮಹಿಳೆಯರು ಮತ್ತು ಮಕ್ಕಳು, ಒಟ್ಟಾರೆ ಕರ್ನಾಟಕದ ಸಾಮಾನ್ಯ ಜನರು.
ಈ ಅಪರಾಧಗಳನ್ನು ಹೊರತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ಆಫ್. ವಿಚಾರಣೆಯನ್ನು ತ್ವರಿತಗೊಳಿಸಿ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತಿದ್ದೇವೆ?’ ಎಂದು ರಮ್ಯಾ ಪೋಸ್ಟ್ ಹಂಚಿಕೊಂಡಿದ್ದರು.
ಆಗ ಪ್ರಜ್ವಲ್ ರೇವಣ್ಣ ಕೇಸ್ ಅನ್ನು ಸಹ ರಮ್ಯಾ ಉಲ್ಲೇಖಿಸಿದ್ದರು.