
Ashwaveega News 24×7 ಅ. 14: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ್ದು ಇದರ ಬೆನ್ನಲ್ಲೆ ಕೊಲೆ ಆರೋಪಿಗಳಾದ ಪವಿತ್ರಾ ಗೌಡ ಮತ್ತು ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಪ್ರಕಟಿಸಿತ್ತು.
ಹೀಗಾಗಿ ಬೆಂಗಳೂರು ಪೊಲೀಸರು ಹೊಸಕೆರೆಯಲ್ಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಿವಾಸ ಅಪಾರ್ಟ್ ಮೆಂಟ್ 15ನೇ ಮಹಡಿಯಲ್ಲಿರುವ ಫ್ಲ್ಯಾ ಟ್ ನಂಬರ್ 4154ರಲ್ಲಿ ಎ2 ಆರೋಪಿ ದರ್ಶನ್ ಅವರನ್ನು ಇನ್ಸ್ಪೆಕ್ಟರ್ಗಳಾದ ನಾಗೇಶ್ ಮತ್ತು ಸುಬ್ರಹ್ಮಣ್ಯ ನೇತೃತ್ವದ ತಂಡ ಬಂಧಿಸಿದೆ.
ದರ್ಶನ್ ಬಂಧನಕ್ಕೂ ಮುನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಗುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.