
Ashwaveega News 24×7 ಅ. 19: ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ ಆರೋಪ ದೇಶದಾದ್ಯಂತ ಭಾರೀ ಸದ್ದು ಮಾಡ್ತಿದೆ.. ಧರ್ಮಸ್ಥಳ ಪ್ರಕರಣ ಎಷ್ಟು ಸತ್ಯ.? ಎಷ್ಟು ಸುಳ್ಳು..? ಧಾರ್ಮಿಕ ಕ್ಷೇತ್ರದ ವಿರುದ್ಧ ಮಾಡುತ್ತಿರುವ ಆರೋಪಗಳ ಹಿಂದೆ ಹುನ್ನಾರ ನಡೆದಿದ್ಯಾ..? ಈ ಷಡ್ಯಂತ್ರದ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಹೀಗೆ ಹತ್ತಾರು ಪ್ರಶ್ನೆಗಳ ದೇಶದ ಜನರನ್ನು ಕಾಡ್ತಿದೆ..
ಕಳೆದ ಮೂರು ವಾರಗಳಿಂದ ಧರ್ಮಸ್ಥಳ ಸುತ್ತ ಸಾಕಷ್ಟು ಬೆಳವಣಿಗೆಗಳು ನಡೀತಿದೆ.. ಆದ್ರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಯಾವಾಗ ಸದನದಲ್ಲೂ ಷಡ್ಯಂತ್ರದ ವಿಚಾರ ಭಾರೀ ಚರ್ಚೆಯಾಯ್ತೋ, ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳ ಬಗ್ಗೆ ಅನ್ಯಗತ್ಯವಾಗಿ ಗೊಂದಲ ಮೂಡ್ತಿಸಿದ್ದಾರೆ. ಸೂಕ್ಷ್ಮವಾಗಿ ಎಲ್ಲವೂ ಪ್ಲಾನ್ ಮಾಡಿ ಷಡ್ಯಂತ್ರ ಮಾಡ್ತಿದ್ದಾರೆ . ತನಿಖೆಗೆ SIT ಮಾಡಿದ್ದರಿಂದ ನಾವೆಲ್ಲರೂ ನಿರಾಳರಾಗಿದ್ದೇವೆ. SIT ಸತ್ಯ ಹೊರಗೆ ತರುತ್ತೆ ಎಂದ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳ ವಿಚಾರ ರಾಜ್ಯ ಸರ್ಕಾರಕ್ಕೂ ದೊಡ್ಡ ಸವಾಲಾಗಿದೆ. ಸದನದಲ್ಲಿ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲು ಮಾಡಬೇಕು ಎಂದು ಪಟ್ಟು ಹಿಡಿದಿದೆ. ಅದ್ರಲ್ಲೂ ಡಿಸಿಎಂ ಡಿಕೆ ಶಿವಕುಮಾರ್, ಷಡ್ಯಂತ್ರ ನಡೆದಿದೆ ಎಂದು ಹೇಳಿರೋದು ಬಿಜೆಪಿ ಶಾಸಕರಿಗೆ ಬಹುದೊಡ್ಡ ಅಸ್ತ್ರವಾಗಿದೆ..
ಧರ್ಮಸ್ಥಳ ವಿರುದ್ಧದ ಅಪಪ್ರಚಾರಕ್ಕೆ ಕರಾವಳಿ ಭಾಗದ ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ್ದೇನೆ. ಸರ್ಕಾರ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. ಧರ್ಮಸ್ಥಳ ಎಸ್ಐಟಿ ತನಿಖೆ ಆದಷ್ಟು ಬೇಗ ಮುಗಿಸಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದ್ದಾರೆ.. ಅಲ್ಲದೇ, ಷಡ್ಯಂತ್ರ ಮಾಡಿದ್ದು ಯಾರೆಂದು ಗೃಹ ಸಚಿವರು ಉತ್ತರ ಕೊಡಬೇಕು. ಪ್ರಕರಣದಲ್ಲಿ ತಮಿಳುನಾಡಿನ ಸಂಸದರ ಬಗ್ಗೆ ಚರ್ಚೆ ಆಗ್ತಿದೆ. ಎಡಪಂಥೀಯರ ಕೈವಾಡ ಇದ್ರೆ ಸರ್ಕಾರ ಉತ್ತರ ಕೊಡಲಿ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಆರೋಪ ನಿನ್ನೆ ಸದನದಲ್ಲಿ ದೊಡ್ಡ ಕೋಲಾಹಲ ಎಬ್ಬಿಸಿತ್ತು. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ತಿಮರೋಡಿ ಬಂಧನಕ್ಕೆ ಸೂಚಿಸಿದ್ರು. ಆದ್ರೆ, ಇಂದು ದಿಢೀರ್ ಉಲ್ಟಾ ಹೊಡೆದಿದ್ದಾರೆ. ನಾನು ಬಂಧನಕ್ಕೆ ಸೂಚಿಸಿಲ್ಲ ಎಂದಿರೋ ಪರಮೇಶ್ವರ್, ಅರೆಸ್ಟ್ ಮಾಡೋದು ಸ್ಥಳೀಯ ಪೊಲೀಸರಿಗೆ ಬಿಟ್ಟಿರುತ್ತೇವೆ . ಹೇಳಿದ ಕೂಡಲೇ ಅರೆಸ್ಟ್ ಮಾಡಲು ಆಗೋದಿಲ್ಲ ಎಂದಿದ್ದಾರೆ.
ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಕ್ಮ್ಯಾನ್ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ಎಸ್ಐಟಿ ರಚನೆಯಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಇನ್ನೂ ಧರ್ಮ ದಂಗಲ್ನಲ್ಲಿ ಕಾಂಗ್ರೆಸ್ ಸರ್ಕಾರ ಇಕ್ಕಟಿಗೆ ಸಿಲುಕಿದೆ. ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಶಾಸಕರು ಮುಗಿಬಿದ್ದಿದ್ದು, ಡ್ಯಾಮೇಜ್ ಕಂಟ್ರೋಲ್ಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಬಿಜೆಪಿಗೆ ನಾಯಕರ ಕೌಂಟರ್ ಕೊಡಲು ಕಾಂಗ್ರೆಸ್ ಶಾಸಕರು ಧರ್ಮಸ್ಥಳ ಚಲೋ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಅಧಿವೇಶನ ಬಳಿಕ 20ಕ್ಕೂ ಹೆಚ್ಚು ಶಾಸಕರು ತಮ್ಮ ತಮ್ಮ ಕ್ಷೇತ್ರದಿಂದ ವೈಯಕ್ತಿಕವಾಗಿ ಧರ್ಮಸ್ಥಳ ಚಲೋ ಮುಂದಾಗಿದ್ದಾರೆ. ಧರ್ಮಸ್ಥಳದ ವಿರುದ್ದ ಅಪಪ್ರಚಾರವಾಗುತ್ತಿರುವುದನ್ನ ಖಂಡಿಸಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಧರ್ಮಸ್ಥಳದ ವಿರುದ್ಧ ಪಿತೂರಿ ಮಾಡುವವರ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.. ಅಲ್ಲದೇ, ಎಸ್ಐಟಿ ಅಧಿಕಾರಿಗಳು ಕೂಡ ಮಾಸ್ಕ್ ಮ್ಯಾನ್ ವಿಚಾರಣೆ ಮುಂದುವರಿದಿದ್ದಾರೆ. ವಿಚಾರಣೆ ವೇಳೆ ಮತ್ತೆ ನಾನು ಶವ ಹೂತಿಟ್ಟ ಜಾಗ ತೋರಿಸುತ್ತೇನೆ ಎಂದಿದ್ದಾನೆ.
ಒಟ್ನಲ್ಲಿ ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದ್ಯೋ ಇಲ್ವೋ ಅನ್ನೋದು ಎಸ್ಐಟಿ ತನಿಖೆಯಿಂದಲೇ ಗೊತ್ತಾಗಬೇಕಿದೆ.