
Ashwaveega News 24×7 ಅ. 21: ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಈಗ ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಾಗಿದೆ.
ಧರ್ಮಸ್ಥಳದ ಕುರಿತು ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಿದ್ದ ಸಮೀರ್ ಎಂಡಿ ಸಾಕಷ್ಟು ವಿಚಾರಗಳ ಬಗ್ಗೆ ಮಾತಾಡಿದ್ದ. ಧರ್ಮಸ್ಥಳದಲ್ಲಿ ಸಾವಿರಾರು ಜನರನ್ನ ರೇಪ್, ಕೊಲೆ ಮಾಡಲಾಗಿದೆ. ಇದನ್ನ ಕೇಳಿದರೆ ನಿಮ್ಮ ರಕ್ತ ಕುದಿಯುತ್ತಿಲ್ವಾ? ಕರ್ನಾಟಕದ ಮೂಲೆ ಮೂಲೆಯಲ್ಲಿರುವವರು ಬೀದಿಗಿಳಿದು ಪ್ರತಿಭಟನೆ ಮಾಡಬೇಕು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ತನ್ನ ವಿಡಿಯೋದಲ್ಲಿ ಹೇಳಿದ್ದ.
ಇನ್ನು, ಪೊಲೀಸರು ಸಮೀರ್ ಬಗ್ಗೆ ಮಾಹಿತಿ ಕೊಡುವಂತೆ ಪೋಷಕರಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಬೆಂಗಳೂರಿನ ಮೂಲೆ ಮೂಲೆಯಲ್ಲಿ ಸಮೀರ್ಗಾಗಿ ಹುಡುಕಾಟ ಶುರುವಾಗಿದೆ. ಸಮೀರ್ನ ಮೊಬೈಲ್ ನೆಟ್ವರ್ಕ್ ಆಧರಿಸಿ ಧರ್ಮಸ್ಥಳದ ಪೊಲೀಸರು ಬಂಧನಕ್ಕೆ ಮುಂದಾಗಿದ್ದಾರೆ.