
Ashwaveega News 24×7 ಸೆ. 15: ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರ ಮೇಲಿನ ಆರೋಪಗಳ ಬಗ್ಗೆ ಎಸ್ಐಟಿ ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿ ಕ್ಲೀನ್ ಚಿಟ್ ನೀಡಿದೆ.
ವಂತಾರದಲ್ಲಿ ಕಾಡು ಪ್ರಾಣಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆನೆಗಳು ಸೇರಿದಂತೆ ಪ್ರಾಣಿಗಳ ಸ್ವಾಧೀನ ಕಾನೂನು ಪ್ರಕ್ರಿಯೆಗಳ ಅನುಗುಣವಾಗಿಯೇ ನಡೆದಿದೆ ಎಂದು ಎಸ್ಐಟಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ.
ಈ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ. ಆನೆಗಳನ್ನು ದೇವಾಲಯಗಳಿಗೆ ಹಿಂತಿರುಗಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು. ಎಸ್ಐಟಿಯ ವರದಿ ಅಂಗೀಕರಿಸಲ್ಪಟ್ಟಿರುವುದರಿಂದ, ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.
ಗುಜರಾತ್ನ ಜಾಮ್ನಗರದಲ್ಲಿರುವ ರಿಲಯನ್ಸ್ನ ವಂತಾರ 3500 ಎಕರೆಗಳಷ್ಟು ವಿಸ್ತಾರವಾಗಿರುವ ವನ್ತಾರಾ, ವಿಶ್ವದ ಅತಿದೊಡ್ಡ ಖಾಸಗಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಕ್ಷಿಸಲ್ಪಟ್ಟ ಆನೆಗಳಿಗೆ ಆಶ್ರಯ, ಆಧುನಿಕ ಪಶುವೈದ್ಯಕೀಯ ಸೌಲಭ್ಯಗಳು ಇದೆ.