
Ashwaveega News 24×7 ಸೆ. 16: ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರಗಳು 200 ರೂಪಾಯಿಗಿಂತ ಹೆಚ್ಚಿನ ಮೊತ್ತಕ್ಕೆ ಸಿನಿಮಾ ಟಿಕೆಟ್ ಮಾರಾಟ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಹೊಂಬಾಳೆ ಫಿಲಮ್ಸ್, ವಿಕೆ ಫಿಲಮ್ಸ್ ಮತ್ತು ಮಲ್ಟಿಪ್ಲೆಕ್ಸ್ ಅಸೋಸಿಯೇಶನ್ ಸರ್ಕಾರದ ಆದೇಶವನ್ನು ವಿರೋಧಿ, ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿವೆ.
ಇಂದು ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್, ಆದೇವನ್ನು ಕಾಯ್ದಿರಿಸಿದೆ. ಮಲ್ಟಿಪ್ಲೆಕ್ಸ್ಗಳ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಗೂ ಧ್ಯಾನ್ ಚಿನ್ನಪ್ಪ ವಾದ ಮಾಡಿದರು. ಸರ್ಕಾರ ಏಕಪಕ್ಷೀಯವಾಗಿ ದರ ನಿಗದಿ ಮಾಡಿ ಆದೇಶಿಸಿದೆ.
ಸರ್ಕಾರದ ನಿಯಮ ಕಾನೂನುಬಾಹಿರವಾಗಿದೆ ಹಾಗೂ ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯಾಗಿದೆ. ಟಿಕೆಟ್ ಖರೀದಿಸಿ ಚಿತ್ರ ನೋಡುವುದು ಗ್ರಾಹಕನಿಗೆ ಬಿಟ್ಟದ್ದು. ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸುವಂತಿಲ್ಲ, ಅಲ್ಲದೆ ಸಿನಿಮಾ ಹಾಲ್ಗಳನ್ನು ನಿರ್ಮಿಸಲು ಕೋಟ್ಯಂತರ ಹಣ ವ್ಯಯಿಸಲಾಗಿದೆ.
ಕಡಿಮೆ ಸೀಟುಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗಿದೆ, ಸೌಲಭ್ಯ ಒದಗಿಸಿರುವ ಸಂಸ್ಥೆಗಳಿಗೆ ದರ ನಿಗದಿ ಸರಿಯಲ್ಲ ಎಂದು ಮುಕುಲ್ ರೋಹಟಗಿ ವಾದ ಮಂಡಿಸಿದರು. ಸರ್ಕಾರಕ್ಕೆ ಟಿಕೆಟ್ ದರ ನಿಗದಿಪಡಿಸುವ ಅಧಿಕಾರವಿದೆ ಎಂದು ಸರ್ಕಾರದ ಪರ ವಕೀಲ ಎಎಜಿ ಇಸ್ಮಾಯಿಲ್ ಜಬೀವುಲ್ಲಾ ವಾದಿಸಿದರು.