
Ashwaveega News 24×7 ಅಕ್ಟೋಬರ್. 06: ನಿರೀಕ್ಷೆಯಂತೆ ಇಂದು ಬಿಹಾರ ವಿಧಾನಸಭೆಗೆ ಚುನಾವಣೆ ಘೋಷಿಸಲಾಗಿದೆ. ಬಿಹಾರದಲ್ಲಿ 2 ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವಂಬರ್ 6 ಮತ್ತು ನವಂಬರ್ 11 ರಂದು 2 ಹಂತದಲ್ಲಿ ಅಸೆಂಬ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ನವಂಬರ್ 14 ರಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುತ್ತೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದ್ದಾರೆ.
ಬಿಹಾರ ವಿಧಾನಸಭೆಯಲ್ಲಿ 243 ವಿಧಾನಸಭಾ ಕ್ಷೇತ್ರಗಳಿವೆ. ಬಿಹಾರ ರಾಜ್ಯದಲ್ಲಿ ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ಗದ್ದುಗೆಗಾಗಿ ಫೈಟ್ ನಡೆಯಲಿದೆ. ಜೊತೆಗೆ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರು ತಮ್ಮ ಜನ ಸೂರಜ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವರು.
ಅ.17ರಂದು ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಸಲು ಕೊನೇ ದಿನ. ಅ.18ರಂದು ಚುನಾವಣಾ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.20ರಂದು ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆ ದಿನ. ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಬಿಹಾರದಲ್ಲಿ ಒಟ್ಟು 7.24 ಕೋಟಿ ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ. ಅವರಲ್ಲಿ 1725 ತೃತೀಯ ಲಿಂಗಿ ಮತದಾರರಿದ್ದಾರೆ.