
Ashwaveega News 24×7 ಅಕ್ಟೋಬರ್. 09: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಮಧ್ಯಾಹ್ನ 12:21ಕ್ಕೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ದೇವರ ಮುಂದೆ ಇಟ್ಟಿದ್ದ ನೈವೇದ್ಯ ಹಳಸಿರಲಿಲ್ಲ ಮತ್ತು ಹೂವು ಬಾಡಿರಲಿಲ್ಲ.
ಅರಸು ವಂಶಸ್ಥ ನಂಜರಾಜೇಅರಸ್ ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಹಾಸನ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ಬಾಮೀಜಿ, ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ.