
maria-corina-machado
Ashwaveega News 24×7 ಅಕ್ಟೋಬರ್. 10: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಮಾರಿಯಾ ಕೊರಿನಾ ಮಚಾದೋ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೆನೆಜುವೆಲಾದ ಜನರ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ಮತ್ತು ಶಾಂತಿಗಾಗಿ ನಡೆಸಿದ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ ನಾರ್ವೆಯ ನೊಬೆಲ್ ಸಮಿತಿಯು ತಿಳಿಸಿದೆ.
2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ 244 ವ್ಯಕ್ತಿಗಳ ಹೆಸರು ನಾಮಿನೇಟ್ ಆಗಿದ್ದರೆ, 94 ಸಂಘಟನೆಗಳ ಹೆಸರು ಸೇರಿ 338 ಹೆಸರುಗಳನ್ನು ಪಟ್ಟಿ ಮಾಡಲಾಗಿತ್ತು. ಅಂತಿಮವಾಗಿ ಆಯ್ಕೆ ಸಮಿತಿ ವೆನೆಜುವೆಲಾದ ವಿಪಕ್ಷ ನಾಯಕಿ ಕೂಡ ಆಗಿರುವ ಮಾರಿಯಾ ಕೊರಿನಾ ಮಚಾದೋ ಅವರನ್ನು ಆಯ್ಕೆ ಮಾಡಿದೆ.
ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಾರಿಯಾ ಕೊರಿನಾ ಮಚಾದೋ ಆಯ್ಕೆದಿಂದಾಗಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಜಾಗತಿಕ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ.
ಈವರೆಗೂ ಭಾರತ ಪಾಕಿಸ್ತಾನ ಸೇರಿ ಎಂಟು ಯುದ್ಧಗಳನ್ನ ನಿಲ್ಲಿಸಿದ್ದ ಜಾಗತಿಕ ಶಾಂತಿಗಾಗಿ ಕೆಲಸ ಮಾಡಿದ್ದೇನೆ ನನಗೆ ಶಾಂತಿ ಪುರಸ್ಕಾರ ಕೊಡಲೇಬೇಕು ಎಂದು ಹೇಳಿದ್ದರು. ಒಂದು ವೇಳೆ ನೊಬೆಲ್ ಶಾಂತಿ ಪುರಸ್ಕಾರ ನೀಡದಿದ್ದರೆ ಅಮೆರಿಕಾದ ಜನರಿಗೆ ಮಾಡಿದ ಅಪಮಾನ ಎಂದು ತಿಳಿಸಿದ್ದರು.