
Ashwaveega News 24×7 ಅಕ್ಟೋಬರ್. 11: ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು.
ಸರ್ಕಾರ ಕಾನೂನು ಮಾಡಿದ್ರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.
ಋತುಚಕ್ರ ರಜೆ ನೀತಿ ಜಾರಿಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ ಅವರು, ಸರ್ಕಾರದ ಕಾನೂನನ್ನು ಎಲ್ಲರೂ ಅನುಷ್ಠಾನ ಮಾಡಬೇಕು, ಪಾಲಿಸಲೇಬೇಕು.
ಇದನ್ನು ಕೇವಲ ಒಂದು ಕಾನೂನು ಎಂಬ ದೃಷ್ಟಿಯಲ್ಲಿ ನೋಡದೇ ಮಾನವೀಯ ದೃಷ್ಟಿಯಿಂದಲೂ ಕಂಪನಿಗಳು ನೋಡಬೇಕು. ಈ ರಜೆ ನೀತಿ ಜಾರಿ ಸಂಬಂಧ ಸ್ವಲ್ವ ದಿನದಲ್ಲಿ ಇನ್ನಷ್ಟು ಚರ್ಚೆ ಮಾಡಲಾಗುವುದು. ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.