Ashwaveega News 24×7 ಡಿಸೆಂಬರ್. 03: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿ ದರ್ಶನ್ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ದರ್ಶನ್ ನಿವಾಸದಲ್ಲಿ ಸೀಜ್ ಮಾಡಿದ್ದ 82 ಲಕ್ಷ ಹಣವನ್ನ ಆದಾಯ ತೆರಿಗೆ ಇಲಾಖೆಗೆ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ತನಿಖೆ ವೇಳೆ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದರು. ತನಿಖೆ ನಡೆಸಿದ ಐಟಿ ಇನ್ನೂ ಸ್ಪಷ್ಟವಾದ ಮಾಹಿತಿ ನೀಡಿರಲಿಲ್ಲ.
ಈ ಸಂದರ್ಭದಲ್ಲಿ ದರ್ಶನ್ 82 ಲಕ್ಷ ರೂಪಾಯಿ ಹಣ ವಾಪಸ್ ನೀಡಲು ಕೋರ್ಟ್ಗೆ ಮನವಿ ಮಾಡಿದ್ದರು. ದರ್ಶನ್ ಅರ್ಜಿಗೆ ಆಕ್ಷೇಪಣೆ ಎತ್ತಿದ ಐಟಿ, ಹಣದ ಮೂಲದ ಬಗ್ಗೆ ದರ್ಶನ್ ಇದೂವರೆಗೂ ಸ್ಪಷ್ಟ ಮಾಹಿತಿ ನೀಡಿಲ್ಲ.
ಹೀಗಾಗಿ ತನಿಖೆ ಮುಂದುವರೆಸಬೇಕಾಗಿದೆ ಎಂದು ಹೇಳಿದೆ. ಸರಿಯಾದ ಮಾಹಿತಿ ನೀಡದ ಹಿನ್ನೆಲೆ 82 ಲಕ್ಷ ರೂ. ಹಣ ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ.
