Ashwaveega News 24×7 ಬೆಂಗಳೂರು, ಜನವರಿ 06 – ಕೆಎಸ್ಆರ್ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್ವರೆಗೆ ಪ್ರೀಮಿಯರ್ ಬಸ್ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ.

KSRTC ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್ಗಳ ಪ್ರಯಾಣ ದರಗಳಲ್ಲಿ ಶೇ.10 ರಿಂದ ಶೇ. 15ರ ವರೆಗೆ ರಿಯಾಯಿತಿ ಘೋಷಿಸಿದೆ. ಜನವರಿಯಿಂದ ಮಾರ್ಚ್ವರೆಗೆ ಪ್ರಯಾಣಿಕರ ದಟ್ಟಣೆ ಕಡಿಮೆಯಿರುವ ಹಿನ್ನಲೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಆದರೆ ಈ ದರ ವಾರದ ದಿನಗಳಲ್ಲಿ ಮಾತ್ರ ಅನ್ವಯವಾಗುತ್ತದೆ. ವಾರಂತ್ಯಗಳಲ್ಲಿ ಅನ್ವಯಿಸುವುದಿಲ್ಲ.
ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರಗಳಲ್ಲಿ ಶೇಕಡ 5 ರಿಂದ 15% ರವರೆಗೆ ರಿಯಾಯಿತಿ ನೀಡಲಾಗಿದೆ.

ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು. ಈ ಮಾರ್ಗದ ಬಸ್ ಟಿಕೆಟ್ ದರದಲ್ಲಿ ಡಿಸ್ಕೌಂಟ್ ಸಿಗುತ್ತದೆ .
