Ashwaveega News 24×7 ಜನವರಿ 07 – ಬಳ್ಳಾರಿ: ರಾಜ್ಯಾದ್ಯಂತ ಬಳ್ಳಾರಿ ಬ್ಯಾನರ್ ಗಲಾಟೆ (Ballari Banner Incident) ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆಯಿಂದ ಕಾಂಗ್ರೆಸ್ (Congress) ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಗುಂಡು (Bullet) ತಗುಲಿ ರಾಜಶೇಖರ್ ಎಂಬಾತ ಮೃತಪಟ್ಟಿದ್ದಾನೆ. ಶಾಸಕ ಸತೀಶ್ ರೆಡ್ಡಿ ಗನ್ಮ್ಯಾನ್ ಬಳಿಯಿದ್ದ ಗನ್ನಿಂದಲೇ ಗುಂಡು ಹಾರಿದ್ದು ಎಂದು ದೃಢಪಟ್ಟಿದೆ. ಈ ನಡುವೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಬ್ಯಾನರ್ ಗಲಾಟೆ ಸಂದರ್ಭದಲ್ಲಿ ಕಿಡಿಗೇಡಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಮನೆ ಮೇಲೆ ಪೆಟ್ರೋಲ್ ಬಾಂಬ್ (Petrol Bomb) ದಾಳಿಗೆ ಪ್ಲ್ಯಾನ್ ಮಾಡಿದ್ರಾ? ಅನ್ನೋ ಪ್ರಶ್ನೆ ಹುಟ್ಟುಹಾಕಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ವೈರಲ್ ಆಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಏನಿದೆ ?
ಬಳ್ಳಾರಿಯಲ್ಲಿ ವೈರಲ್ ಆಗಿರುವ ವಿಡಿಯೋ ಸದ್ದು ಮಾಡುತ್ತಿದೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಗಲಾಟೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಕಲ್ಲು ತೂರಾಟ ಕೂಡ ಆಗಿತ್ತು. ಗಾಳಿಯಲ್ಲಿ ಹಾರಿದ್ದ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ಕೂಡ ಸಾವನ್ನಪ್ಪಿದ್ದನು. ಆದ್ರೀಗ ಗಲಾಟೆ ವೇಳೆ ಕಿಡಿಗೇಡಿಗಳು ಆಟೋದಲ್ಲಿ ಪೆಟ್ರೋಲ್ ಬಾಂಬ್ ತುಂಬಿಕೊಂಡು ಬಂದಿದ್ದರಾ? ಎಂಬ ಅನುಮಾನ ಮೂಡಿದೆ.
