Ashwaveega News 24×7 ಜನವರಿ 07-ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಮಹಿಳಾ ದೌರ್ಜನ್ಯಕ್ಕೆ ಸಮಾನವಾಗಿದೆ ಎಂದು ಆರೋಪಿಸಿದರು. ಕೂಡಲೇ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
