Ashwaveega News 24×7 ಜನವರಿ 15 – ಬೆಂಗಳೂರು: ಗ್ಯಾರಂಟಿ ಯೋಜನೆಗಳು ಜಾರಿ ಆಗ್ತಿದ್ದಂತೆ ಫ್ರೀ ಫ್ರೀ ಅಂತ ಖುಷಿ ಪಟ್ಟಿದ್ದ ಜನರು ಇದೀಗ ಬೆಲೆ ಏರಿಕೆಗೆ ಬೇಸತ್ತಿದ್ದಾರೆ. ದುಬಾರಿ ದುನಿಯಾದಲ್ಲಿ ಬೆಲೆಗಳು ಗಗನಕ್ಕೇರಿದೆ. ಇಂದಿನ ಕರ್ನಾಟಕದಲ್ಲಿ ಹಾಲು, ವಿದ್ಯುತ್, ಟ್ರೋಲ್ ದರ ಏರಿಕೆಯ ಜೊತೆಗೆ ಕಸಕ್ಕೆ ಸೆಸ್ ಕೂಡ ಕಟ್ಟಬೇಕಿದೆ. ಗ್ಯಾರಂಟಿ ಯೋಜನೆಗಳ ಅಸೆ ತೋರಿಸಿ ಸಿಎಂ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ಬರೆ ಎಳೆದಿದ್ದಾರೆ ಎಂದು ಜನರು ಹಿಡಿಶಾಪ ಹಾಕ್ತಿದ್ದಾರೆ. ಇದರ ನಡುವೆಯೇ ವಿದ್ಯುತ್ ದರ ಏರಿಕೆ ಬೆಸ್ಕಾಂ ಮುಂದಾಗಿದೆ.
ಹೌದು.. ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.
ಮೂಲಗಳ ಪ್ರಕಾರ ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಸ್ಕಾಂ ಪ್ರಸ್ತಾವನೆ ಬಗ್ಗೆ FKCCI ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆಗೆ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ …
