Ashwaveega News 24×7 ಜನವರಿ 16 – ಬೆಂಗಳೂರು ಗ್ರಾಮಾಂತರ – ರಾಜ್ಯಾದ್ಯಂತ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಅದರಲ್ಲೂ ಪಿಡಿಒ ಹುದ್ದೆಗಳ ಭರ್ತಿಗೆ ವಿಳಂಬವಾಗುತ್ತಿರುವುದು ಸಮಸ್ಯೆಯಾಗಿದೆ . ಸುಮಾರು 2.84 ಲಕ್ಷ ಹುದ್ದೆಗಳು ಖಾಲಿ ಇದ್ದರೂ, ಸರ್ಕಾರ ಕೇವಲ 24,300 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದೆ ಅಂತ ವರದಿಯಾಗಿದೆ, ಇದರಿಂದಾಗಿ ಶಿಕ್ಷಣ, ಆರೋಗ್ಯ, ಕಂದಾಯ ಇಲಾಖೆಗಳ ಕೆಲಸಗಳು ಕುಂಠಿತಗೊಂಡಿವೆ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿಗಳ ಕೊರತೆಯಿಂದ ಗ್ರಾಮ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ.
ರಾಜ್ಯದ 980 PDO ಕೊರತೆಯಿಂದಾಗಿ ಗ್ರಾಮೀಣ ಜನರಿಗೆ ಕುಡಿಯುವ ನೀರು, ರಸ್ತೆ, ನೈರ್ಮಲ್ಯ, ಪಿಂಚಣಿ ಸೇರಿದಂತೆ ವಿವಿಧ ಯೋಜನೆಗಳ ಸೇವೆ ತಲುಪಿಸಲು ಹಿನ್ನಡೆಯಾಗುತ್ತಿದೆ. ಪ್ರಭಾರಿಗಳ ಮೇಲಿನ ಒತ್ತಡ ಮತ್ತು ಕೆಲ ಪಿಡಿಒಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿರುವುದರಿಂದ ಕೆಲಸಗಳು ವಿಳಂಬವಾಗುತ್ತಿವೆ. ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪಿಡಿಒಗಳ ನೇಮಕಕ್ಕೆ ಸರ್ಕಾರ ಆದ್ಯತೆ ನೀಡಬೇಕಿದೆ.
ರಾಜ್ಯದ 980 ಗ್ರಾ.ಪಂಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಹುದ್ದೆಗಳು ಖಾಲಿ ಇವೆ. ಇದರಿಂದ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.
ರಾಜ್ಯದಲ್ಲಿಒಟ್ಟು 5,953 ಗ್ರಾಮ ಪಂಚಾಯಿತಿಗಳಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು, ರಸ್ತೆ, ಬೀದಿ ದೀಪ, ನೈರ್ಮಲ್ಯ, ವಸತಿ, ಪಿಂಚಣಿ, ಕೃಷಿ, ಮಹಿಳಾ ಸಬಲೀಕರಣ, ಸ್ವಚ್ಛ ಭಾರತ್ ಮಿಷನ್, ಡಿಜಿಟಲ್ ಸೇವೆಗಳು ಸೇರಿದಂತೆ ವಿವಿಧ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಗ್ರಾಪಂಗಳು ಕೆಲಸ ಮಾಡುತ್ತವೆ.
