Ashwaveega News 24×7 ಜನವರಿ 19 : ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ದಿಢೀರ್ ಆಗಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿಯನ್ನು ಸಹೋದರ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಹಿನ್ನೆಲೆ ಇರಬಹುದಾ ಎಂಬ ಕುತೂಹಲ ಮೂಡಿದೆ .
ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಚರ್ಚೆಗಳು, ಪಕ್ಷದ ಒಳರಾಜಕಾರಣ ಹಾಗೂ ರಾಜ್ಯದ ಮುಂದಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರ ಡೆಲ್ಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಣ್ಣ ಡಿ.ಕೆ. ಶಿವಕುಮಾರ್ ಪರವಾಗಿ ಪಕ್ಷದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸುವ ಉದ್ದೇಶದಿಂದಲೇ ಈ ಭೇಟಿ ನಡೆದಿರಬಹುದು ಅಂತೆ ..
ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಡಿ.ಕೆ. ಶಿವಕುಮಾರ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಸುರೇಶ್ ಅವರ ಈ ದಿಢೀರ್ ಪ್ರವಾಸಕ್ಕೆ ರಾಜಕೀಯ ಮಹತ್ವ ದೊರೆತಿದೆ. ಡೆಲ್ಲಿಯಲ್ಲಿ ಅವರು ಕಾಂಗ್ರೆಸ್ನ ಪ್ರಮುಖ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಅಣ್ಣನ ಪರವಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ – ಅಂದರೆ “ಫುಲ್ ಬ್ಯಾಟಿಂಗ್” ನಡೆಸುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ .
ಈ ದಿಢೀರ್ ಡೆಲ್ಲಿ ಭೇಟಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ಕಾದು ನೋಡಬೇಕಿದೆ.
