Ashwaveega News 24×7 ಜನವರಿ 20 – ಬೆಂಗಳೂರು : ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿದಂತೆ ಕಾಣಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಸರ್ಕಾರ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ಪ್ರಕರಣ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಲಾಗಿದೆ.
ಡಿಸಿಆರ್ಇ (DCRE) ಡಿಜಿಪಿಯಾಗಿರುವ ರಾಮಚಂದ್ರ ರಾವ್ ವಿರುದ್ಧ ಸರ್ಕಾರಿ ಕಚೇರಿಯಲ್ಲೇ ಮಹಿಳೆಯರೊಂದಿಗೆ ರಾಸಲೀಲೆ ನಡೆಸಿದ ಆರೋಪ ಕೇಳಿಬಂದಿದೆ. ಮಹಿಳೆಯರ ಜೊತೆಗಿರುವಂತೆ ಹೇಳಲಾಗುತ್ತಿರುವ ಹಲವು ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ.
ಈ ಕುರಿತು ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣದ ಗಂಭೀರತೆಯನ್ನು ಗಮನಿಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಅದರಂತೆ, ವಿಡಿಯೋ ವೈರಲ್ ಆದ ತಕ್ಷಣವೇ ಸರ್ಕಾರ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದೆ.
ಡಿಜಿಪಿ ಹುದ್ದೆಯಲ್ಲಿರುವ ಅಧಿಕಾರಿಯಿಂದ ಇಂತಹ ವರ್ತನೆ ಅಸಹ್ಯಕರ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣದ ಸಂಪೂರ್ಣ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ …
