
a contractor killed in shiggaon of haveri
ಹಾಡಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
40 ವರ್ಷದ ಶಿವಾನಂದ ಕುನ್ನೂರು ಕೊಲೆಯಾದ ಗುತ್ತಿಗೆದಾರ. ಶಿಗ್ಗಾಂವ್ ಪಟ್ಟಣದ ಹೊರವಲಯದ ಗಂಗಿಭಾವಿ ಕ್ರಾಸ್ ಬಳಿ ಗುತ್ತಿಗೆದಾರ ಶಿವಾನಂದ ಮೇಲೆ ಹಾಡಹಗಲೇ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಕೊಲೈಗೈದಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಹಾಡಹಗಲೇ ನಡೆದ ಭೀಕರ ಕೊಲೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಶಿವಾನಂದ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಶಿಗ್ಗಾಂವ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.