Ashwaveega News 24×7 ಮಾರ್ಚ್ 22– 2026 : ಬೆಳಗಾವಿ: ಮಾನವೀಯತೆಯನ್ನು ಮೀರಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ತನ್ನದೇ 15 ದಿನದ ಹಸುಗೂಸನ್ನು ವಿಷಪ್ರಾಶಣ ಮಾಡಿ ಕೊಲೆ ಮಾಡಿದ ಕ್ರೂರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಶಿಶುವನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ತಂದೆ ಭೀಮರಾಯ ಚಿಪ್ಪಾಡಿ ಹೆಣ್ಣು ಮಗು ಬೇಡವೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಅಂತೆ . ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಹಸುಗೂಸು ಅಸ್ವಸ್ಥಗೊಂಡ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ತಾಯಿ ಶೀಲಾ ಚಿಪ್ಪಾಡಿ ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧಾರವಾಗಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯಾದ ಭೀಮರಾಯ ಚಿಪ್ಪಾಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ಈ ಘಟನೆ ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಲಿಂಗ ಭೇದಭಾವದ ಕಹಿ ಸತ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಹೆಣ್ಣುಮಕ್ಕಳ ಮೇಲಿನ ಹಿಂಸೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
