
ಬೆಂಗಳೂರು: ಇಂದು ಸಂಜೆ 5:36ರ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ, ಅಂಬ್ಯುಲೆನ್ಸ್ಗೆ ದಾರಿ ಬಿಡಲು ಹೋಗಿ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಭೀಕರವಾಗಿ ಆಘಾತ ಮೂಡಿಸಿದೆ. ಈ ಅಪಘಾತದ ದೃಶ್ಯ ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದೆ.
ಕಾರಿನ ನಿಯಂತ್ರಣ ತಪ್ಪಿದ್ದು, ಅದೃಷ್ಟವಶಾತ್, ಕಾರು ಫ್ಲೈಓವರ್ನಿಂದ ಕೆಳಗೆ ಬೀಳದೆ ಪಾರಾಗಿದೆ. ಸ್ವಲ್ಪ ಯಾಮಾರಿದ್ರೆ, ಕಾರು ಫ್ಲೈಓವರ್ನಿಂದ ಕೆಳಗೆ ಬೀಳುವ ಆತಂಕ ಇತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಘಟನೆಯ ರಭಸಕ್ಕೆ ಕಾರು ಇ-ಸೈಕಲ್ ಮತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಾರ ಹಾನಿ ಉಂಟಾಗಿದೆ.
ಕಾರಿನ ಪಲ್ಟಿ, ಇ-ಸೈಕಲ್ಗೆ ಡಿಕ್ಕಿ:
ಅಪಘಾತದ ವೇಳೆ, ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪಲ್ಟಿಯ ರಭಸಕ್ಕೆ ಕಾರು ಇ-ಸೈಕಲ್ ಸಹಿತ ಪಕ್ಕದಲ್ಲಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಸವಾರರು ಅದೃಷ್ಟವಶಾತ್ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದ ನಂತರ:
ಘಟನೆಯ ನಂತರ, ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಸ್ಥಳಕ್ಕೆ ತಕ್ಷಣ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿಡಿಯೋ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮುಂದುವರಿದಿದೆ.