ಬಳ್ಳಾರಿ : ಬಳ್ಳಾರಿಯಲ್ಲಿ ಗರ್ಭಿಣಿ ಬಾಣಂತಿ ಸಾವು ಪ್ರಕರಣ ವಿಚಾರವಾಗಿ ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ.
ಬಳ್ಳಾರಿಗೆ ಭೇಟಿ ಕೊಟ್ಟಿಲ್ಲ ಎಂದರೆ, ಈ ಪ್ರಕರಣವನ್ನ ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳಷ್ಟು ಜವಾಬ್ದಾರಿ ಇದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ನಿರ್ಧಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ರು.