
2025ರ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಡಿಫೆಂಡಿಂಗ್ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಇಬ್ಬರು ಹೊಸ ಆಟಗಾರರು ಸೇರ್ಪಡೆಯಾಗಿದ್ದಾರೆ. ಆರ್ಸಿಬಿ ತಂಡದಲ್ಲಿದ್ದ ಸೋಪಿ ಡಿವೈನ್ ಹಾಗೂ ಕೇಟ್ ಕ್ರಾಸ್ ಟೂರ್ನಿಯಿಂದ ಹೊರ ಬಿದ್ದಿರುವುದರಿಂದ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅವರಿಬ್ಬರ ಸ್ಥಾನಕ್ಕೆ ಆಸ್ಟ್ರೇಲಿಯಾದ ಹೀದರ್ ಗ್ರಹಾಂ ಹಾಗೂ ಕಿಮ್ ಗಾರ್ತ್ ಆಯ್ಕೆಯಾಗಿದ್ದಾರೆ

ಟಿ-20ಯಲ್ಲಿ ಈ ಇಬ್ಬರು ಆಟಗಾರರು ಉತ್ತಮ ದಾಖಲೆ ಹೊಂದಿದ್ದು ಆರ್ಸಿಬಿಗೆ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ. 2025ರ ವುಮೆನ್ಸ್ ಪ್ರೀಮಿಯರ್ ಲೀಗ್ ಫೆಬ್ರವರಿ 14 ರಂದು ಡಿಫೆಂಡಿಂಗ್ ಚಾಂಪಿಯನ್ ಆರ್ಸಿಬಿ ಹಾಗೂ ಗುಜರಾತ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.
ಅಭಿಷೇಕ್ ಎಸ್