ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಗೆ ಅನುಮತಿ ವಿಚಾರದಲ್ಲಿ ಬಿಗ್ ಅಪ್ಡೇಟ್ ಲಭ್ಯವಾಗಿದೆ. ಒಂದೆಡೆ ಮುಡಾ ಕೇಸ್ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದಾರೆ. ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ.
ಇದರ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಯಿತು. ಕೊನೆಯಲ್ಲಿ, ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆ ಬಾಕಿ ಇದೆ. ಆ ಅರ್ಜಿಯ ವಿಚಾರಣೆಯನ್ನೂ ಮುಂದೂಡಬೇಕು.
ನಮ್ಮ ಕಕ್ಷಿದಾರರಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ವಿಚಾರಣೆಗೆ ಒಳಪಡಬೇಕಾಗಿದೆ. ಹೀಗಾಗಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದೇವೆ. ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಲೋಕಾಯುಕ್ತ ಪೊಲೀಸರ ತನಿಖೆ ಸ್ಥಿತಿಗತಿ ವರದಿ ಕೇಳಿದೆ. ಹೀಗಾಗಿ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ದೇವರಾಜು ಪರ ವಕೀಲ ದುಷ್ಯಂತ್ ದವೆ ವಾದ ಮಂಡಿಸಿದರು.
ಸಿಬಿಐ ತನಿಖೆ ಬಗ್ಗೆ ಜನವರಿಯಲ್ಲಿ ವಿಚಾರಣೆ ನಡೆಯಲಿ. ವಿಭಾಗೀಯ ಪೀಠದ ವಿಚಾರಣೆ ನಂತರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿ ಎಂದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ ಹೊರಡಿಸಿತು. ಸಿಬಿಐ ತನಿಖೆಗೆ ಕೋರಿರುವ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ತಡೆ ಕೋರಲು ನಿರಾಕರಿಸಿತು. ಮುಂದಿನ ವಿಚಾರಣೆಯನ್ನ ಜನವರಿ 25ಕ್ಕೆ ಮುಂದೂಡಿಕೆ ಮಾಡಿತು.