Ashwaveega News 24×7 ನವೆಂಬರ್. 23: ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಷನ್ ಡಾಕ್ಟರೇಟ್ ಪದವಿ ಲಭಿಸಿದೆ.

ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಅವ್ರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳ ಕಾಡು- ಮಾವಿನ ಪ್ರಭೇಧಗಳ ಅನುವಂಶಿಕ ವ್ಯತ್ಯಾಸದ ಮೌಲ್ಯಮಾಪನ ಮಹಾಪ್ರಬಂಧವನ್ನ ಮಂಡಿಸಿದ್ದರು.
ಈ ವಿಷಯಕ್ಕೆ ಸಂಬಂಧಪಟ್ಟಂತೆ ಡಾಕ್ಟರೇಟ್ ಲಭಿಸಿದೆ. ರುಚಿಕಾ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು ಗ್ರಾಮದ ಜಿನ್ನಪ್ಪ ಪೂಜಾರಿ- ಲೀಲಾವತಿ ದಂಪತಿಯ ಪುತ್ರಿ.

ಕಾರ್ಕಳ ಪತ್ತೊಂಜಿಕಟ್ಟೆಯ ವಿಠಲ್ ಎಂ. ಸಾಲ್ಯಾನ್ ಹಾಗೂ ವಸಂತಿ ವಿ. ಯವರ ಸೊಸೆ ಹಾಗೂ ರೋಶನ್ ಸಾಲ್ಯಾನ್ ಅವರ ಪತ್ನಿ
