ಬಾಲಿವುಡ್ ನಟ ಸಲ್ಮಾನ್ಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಐದು ಕೋಟಿ ರೂಪಾಯಿ ಹಣ ನೀಡದಿದ್ರೆ ಬಾಬಾ ಸಿದ್ದಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ
ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ನೀಡಬೇಕು. ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್ನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 1 ರಂದು ಪನ್ವೇಲ್ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ನಾಲ್ವರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮುನ್ನ ಏಪ್ರಿಲ್ನಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟನ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಂಧಿತ ಆರೋಪಿ ಹರಿಯಾಣ ಮೂಲದ ವ್ಯಕ್ತಿಯಾಗಿದ್ದು ಆತನನ್ನು ನವಿ ಮುಂಬೈಗೆ ಕರೆತರಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : https://ashwaveega.com/sanjay-dutt-visits-kateelu-durgaparameshwari-temple/