ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು, ಇಂದು ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದು, ಮುಡಾ ಸಂಕಷ್ಟದ ಬೆನ್ನಲ್ಲೇ ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾವಚಿತ್ರ ಇರೋ ಬ್ಯಾನರ್ ಅಳವಡಿಕೆ ಮಾಡಲಾಗಿದೆ.
ಬ್ಯಾನರ್ನಲ್ಲಿ ಜಾರಕಿಹೊಳಿ ಭಾವಚಿತ್ರದ ಕೆಳಗೆ ʻಭವಿಷ್ಯದ ಮುಂದಿನ ಸಿಎಂʼ ಎಂದು ಬರೆಯಲಾಗಿದ್ದು, ಜೊತೆಗೆ ಉಳಿದ ಸಹೋದರರು ಹಾಗೂ ಅವರ ಮಕ್ಕಳ ಭಾವಚಿತ್ರಗಳನ್ನು ಬ್ಯಾನರ್ನಲ್ಲಿ ಹಾಕಲಾಗಿದೆ. ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಭೀಮಶಿ ಜಾರಕಿಹೊಳಿ, ಎಂಎಲ್ಸಿ ಲಖನ್ ಜಾರಕಿಹೊಳಿ, ಸತೀಶ್ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಅವರ ಭಾವಚಿತ್ರಗಳೂ ಈ ಬ್ಯಾನರ್ನಲ್ಲಿ ಇದೆ.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮುಖಂಡರಿಂದ ಬ್ಯಾನರ್ ಅಳವಡಿಕೆ ಮಾಡಿದ್ದು, ಬ್ಯಾನರ್ನಲ್ಲಿ ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬ ಹಾಗೂ ವಾಲ್ಮೀಕಿ ಜಯಂತಿ ಶುಭಾಶಯಗನ್ನು ಅಭಿಮಾನಿಗಳು ಕೋರಿದ್ದಾರೆ.
ಕಳೆದ ಕೆಲ ದಿನಗಳಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿದೆ. ಬಿಜೆಪಿ ನಾಯಕರೂ ಸಹ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇತ್ತ ಸತೀಶ್ ಜಾರಕಿಹೊಳಿ, ಡಿ.ಕೆ ಶಿವಕುಮಾರ್ ಅಥವಾ ಹೆಚ್.ಸಿ ಮಹದೇವಪ್ಪ ಮೂವರಲ್ಲಿ ಒಬ್ಬರಿಗೆ ಚಾನ್ಸ್ ಸಿಗಬಹುದು ಎಂಬ ವದಂತಿಗಳೂ ಹರಿದಾಡುತ್ತಿವೆ. ಈ ನಡುವೆ ಸತೀಶ್ ಜಾರಕಿಹೊಳಿ ಅವರ ನಡೆ ದಿನದಿಂದ ದಿನಕ್ಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದೆ.
ಇದನ್ನೂ ಓದಿ : https://ashwaveega.com/the-boy-who-was-missing-3-days-ago-was-found-dead-today/